ಇ.ಡಿ
ರಾಂಚಿ: ಜಾರ್ಖಂಡ್‌ನ ಮಾಜಿ ಸಚಿವ ಯೋಗೇಂದ್ರ ಸಾವೊ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ನಡೆಯುತ್ತಿರುವ ಮರಳು ಅಕ್ರಮ ಗಣಿಗಾರಿಕೆ ಮತ್ತು ಸುಲಿಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ಜಾರ್ಖಂಡ್‌ನ ಹಲವು ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹಜಾರಿಬಾಗ್ ಮತ್ತು ರಾಂಚಿಯಲ್ಲಿ ಕನಿಷ್ಠ ಎಂಟು ಸ್ಥಳಗಳ ಮೇಲೆ ಬೆಳಗಿನ ಜಾವದಿಂದ ದಾಳಿ ನಡೆಸಲಾಗಿದೆ. ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯ ನಿಬಂಧನೆಗಳ ಪ್ರಕಾರ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸುಲಿಗೆ, ಅಕ್ರಮ ಮರಳು ಗಣಿಗಾರಿಕೆ ಮತ್ತು ಭೂಕಬಳಿಕೆಯಂತಹ ಚಟುವಟಿಕೆಗಳ ಮೂಲಕ ಗಣನೀಯ ಆದಾಯವನ್ನು ಗಳಿಸಲಾಗಿದೆ ಎಂಬ ಆರೋಪದ ಹಿನ್ನೆಲೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ಸಾವೊ ಜಾರ್ಖಂಡ್‌ನ ಮಾಜಿ ಕೃಷಿ ಸಚಿವರಾಗಿದ್ದಾರೆ. ಅವರ ಮಗಳು ಶಾಸಕಿ ಅಂಬಾ ಪ್ರಸಾದ್ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ವರ್ಷ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.