ADVERTISEMENT

ಪರಮ್ ಬೀರ್ ಸಿಂಗ್ ಹೇಳಿಕೆ ದಾಖಲಿಸಿದ ಇ.ಡಿ

ಪಿಟಿಐ
Published 5 ಡಿಸೆಂಬರ್ 2021, 12:14 IST
Last Updated 5 ಡಿಸೆಂಬರ್ 2021, 12:14 IST
ಪರಂಬೀರ್ ಸಿಂಗ್‌
ಪರಂಬೀರ್ ಸಿಂಗ್‌   

ಮುಂಬೈ/ನವದೆಹಲಿ (ಪಿಟಿಐ): ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಕಮಿಷನರ್ ಪರಮ್‌ಬೀರ್ ಸಿಂಗ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡಿದೆ.

ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ದಕ್ಷಿಣ ಮುಂಬೈನಲ್ಲಿರುವ ಏಜೆನ್ಸಿಯ ಕಚೇರಿಯಲ್ಲಿ ಶುಕ್ರವಾರ ದಾಖಲಿಸಿಕೊಳ್ಳಲಾಗಿದೆ.

ಸಿಂಗ್ ಅವರು ಆಗಿನ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ವಿರುದ್ಧ ಮಾಡಿರುವ ಆರೋಪಗಳು ಸೇರಿದಂತೆ ಪ್ರಕರಣದ ವಿವಿಧ ಅಂಶಗಳ ಬಗ್ಗೆ ಸುಮಾರು ಐದು ಗಂಟೆಗಳ ಕಾಲ ಪ್ರಶ್ನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.