ADVERTISEMENT

ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ ಮನವಿ

‘ಐ–ಪ್ಯಾಕ್‌’ ಕಚೇರಿ ಮೇಲಿನ ಇ.ಡಿ ದಾಳಿ ವೇಳೆ ಪಶ್ಚಿಮ ಬಂಗಾಳ ಸರ್ಕಾರ ಅಡ್ಡಿಪಡಿಸಿದ ಆರೋಪ; ಟಿಎಂಸಿಯಿಂದ ಕೇವಿಯಟ್‌

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 16:12 IST
Last Updated 11 ಜನವರಿ 2026, 16:12 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ‘ಐ–ಪ್ಯಾಕ್‌’ ಕಚೇರಿ ಮೇಲಿನ ಜ8ರಂದು ಇ.ಡಿ ದಾಳಿ ವೇಳೆ ಪಶ್ಚಿಮ ಬಂಗಾಳ ಸರ್ಕಾರ ಅಡ್ಡಿಪಡಿಸಿದ ಕುರಿತು ಸಿಬಿಐ ತನಿಖೆ ಕೋರಿ ಜಾರಿ ನಿರ್ದೇಶನಾಲಯವು ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. 

ಪಶ್ಚಿಮ ಬಂಗಾಳ ಸರ್ಕಾರವು ಕೂಡ ಕೇವಿಯಟ್‌ ಸಲ್ಲಿಸಿದ್ದು, ಯಾವುದೇ ಆದೇಶ ಹೊರಡಿಸುವ ಮುನ್ನ ಮೊದಲು ವಿಚಾರಣೆ ನಡೆಸಬೇಕು ಎಂದು ಕೋರಿದೆ. 

ADVERTISEMENT
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯ ಪೊಲೀಸರು ಶೋಧ ಕಾರ್ಯಾಚರಣೆ ವೇಳೆ ಅಡ್ಡಿಪಡಿಸಿ, ಭೌತಿಕ ಹಾಗೂ ಎಲೆಕ್ಟ್ರಾನಿಕ್‌ ಸಾಕ್ಷ್ಯಗಳನ್ನು ಕೊಂಡೊಯ್ದಿದ್ದು, ಶಾಸನಬದ್ಧ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಇ.ಡಿ ಯು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.