ADVERTISEMENT

ಅನಿಲ್ ಅಂಬಾನಿಗೆ ಸೇರಿದ ₹3 ಸಾವಿರ ಕೊಟಿ ಆಸ್ತಿ ಮುಟ್ಟುಗೋಲು ಹಾಕಿಕೊಂಡ ED

ಪಿಟಿಐ
Published 3 ನವೆಂಬರ್ 2025, 4:26 IST
Last Updated 3 ನವೆಂಬರ್ 2025, 4:26 IST
<div class="paragraphs"><p>ಅನಿಲ್ ಅಂಬಾನಿಗೆ ಸೇರಿದ&nbsp;ಆಸ್ತಿ ಮುಟ್ಟುಗೋಲು ಹಾಕಿಕೊಂಡ ED</p></div>

ಅನಿಲ್ ಅಂಬಾನಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಂಡ ED

   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಸಂಬಂಧಿಸಿದ ₹3,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಮುಂಬೈನ ಪಾಲಿ ಹಿಲ್‌ನಲ್ಲಿರುವ ಮನೆ ಸೇರಿದಂತೆ ಅವರ ಸಮೂಹ ಕಂಪನಿಗಳ ಇತರ ವಸತಿ ಮತ್ತು ವಾಣಿಜ್ಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ.

ADVERTISEMENT

ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸೇರಿದ ಜಮೀನು ಮತ್ತು ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಠಾಣೆ, ಹೈದರಾಬಾದ್, ಚೆನ್ನೈ ಮತ್ತು ಪೂರ್ವ ಗೋದಾವರಿಯಲ್ಲಿರುವ ಆಸ್ತಿಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಮೂಲಗಳ ಪ್ರಕಾರ ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಒಟ್ಟು ಮೌಲ್ಯ ₹3,084 ಕೋಟಿ ಆಗಿದೆ.ಅ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.