ADVERTISEMENT

₹1.53 ಕೋಟಿ ಮೊತ್ತದ ವಿದೇಶಿ ಹಣ ಇ.ಡಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 23 ಮೇ 2022, 13:56 IST
Last Updated 23 ಮೇ 2022, 13:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋಲ್ಕತ್ತದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಅಮೆರಿಕದ ಡಾಲರ್‌, ಯೂರೊ ಸೇರಿ ₹1.53 ಮೌಲ್ಯದ ವಿದೇಶಿ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು(ಇ.ಡಿ) ಎಂದು ಸೋಮವಾರ ತಿಳಿಸಿದೆ.

ಕಸ್ಟಮ್‌ ಅಧಿಕಾರಿಗಳ ಮಾಹಿತಿ ಮೇರೆಗೆ ಉತ್ತರ ಪ್ರದೇಶದ ಗೋರಖ್‌ಪುರದಿಂದ ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯಿಂದ ₹1.27 ಕೋಟಿ ಮೌಲ್ಯದ ಅಮೆರಿಕ ಡಾಲರ್‌ ಮತ್ತು ₹25.18 ಲಕ್ಷ ಮೌಲ್ಯದ ಯೂರೊ ವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಯಾಣಿಕನ ಗುರುತು ಪತ್ತೆಯಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ವಿದೇಶ ವಿನಿಮಯ ನಿರ್ವಹಣಾ ಕಾಯಿದೆ(ಎಫ್‌ಇಎಂಎ) ಅಡಿಯಲ್ಲಿ ವಿದೇಶಿ ವಿನಿಮಯಕ್ಕೆ ಸೂಕ್ತ ದಾಖಲೆ ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ಹಾಗೂ ಯಾವುದೇ ದಾಖಲೆಗಳಿಲ್ಲದೆ ದೊಡ್ಡ ಮೊತ್ತದ ಹಣದೊಂದಿಗೆ ಪ್ರಯಾಣ ಮಾಡಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.