ADVERTISEMENT

ನವಾಬ್‌ ಮಲಿಕ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಪಿಟಿಐ
Published 21 ಏಪ್ರಿಲ್ 2022, 13:40 IST
Last Updated 21 ಏಪ್ರಿಲ್ 2022, 13:40 IST
ನವಾಬ್‌ ಮಲಿಕ್‌
ನವಾಬ್‌ ಮಲಿಕ್‌   

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಎನ್‌ಸಿಪಿ ನಾಯಕ ಮಲಿಕ್‌ ಅವರನ್ನು ಇದೇ ಫೆಬ್ರುವರಿ 23 ರಂದು ಬಂಧಿಸಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಪ್ರಕರಣಗಳ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯಕ್ಕೆ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಲಾಗಿದೆ ಎಂದು ಇ.ಡಿ ಪರ ವಕೀಲರು ತಿಳಿಸಿದ್ದಾರೆ.

ADVERTISEMENT

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿ ಮಲಿಕ್‌ ವಿರುದ್ಧ ಇ.ಡಿ ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.