ನವದೆಹಲಿ: ಹಲವು ಕಾನೂನುಬಾಹಿರ ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಈ ಪ್ರಕರಣಗಳ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿ ಮೆಟಾ ಹಾಗೂ ಗೂಗಲ್ ಕಂಪನಿಗಳ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ಶನಿವಾರ ಹೇಳಿವೆ.
ಇಲ್ಲಿನ ಇ.ಡಿ ಕಚೇರಿಗೆ ಜುಲೈ 21ರಂದು ಹಾಜರಾಗಿ, ಹಣ ಅಕ್ರಮ ವರ್ಗಾವಣೆ ಕಾಯ್ದೆ(ಪಿಎಂಎಲ್‌ಎ) ಅಡಿ ಹೇಳಿಕೆಗಳನ್ನು ದಾಖಲಿಸುವಂತೆ ಉಭಯ ಕಂಪನಿಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮನ್ಸ್ ಕುರಿತಂತೆ ಮೆಟಾ ಹಾಗೂ ಗೂಗಲ್ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಾನೂನುಬಾಹಿರವಾಗಿ ಬೆಟ್ಟಿಂಗ್ ನಡೆಸುವ ಹಲವು ವೇದಿಕೆಗಳು, ಬೆಟ್ಟಿಂಗ್‌ಗೆ ಸಂಬಂಧಿಸಿದ ಜಾಹೀರಾತುಗಳು ಹಾಗೂ ಲಿಂಕ್‌ಗಳನ್ನು ಸಾಮಾಜಿಕ ಮಾಧ್ಯಮಗಳು ಹಾಗೂ ಆ್ಯಪ್ ಸ್ಟೋರ್‌ಗಳನ್ನು ಅಪ್‌ಲೋಡ್ ಮಾಡುತ್ತಿರುವ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.
ಕೆಲವು ನಟರು, ಸೆಲೆಬ್ರಿಟಿಗಳು ಹಾಗೂ ಕ್ರೀಡಾಪಟುಗಳ ವಿರುದ್ಧವೂ ಇ.ಡಿ ತನಿಖೆ ಕೈಗೊಂಡಿದೆ. ಇವರಿಗೂ ಸಮನ್ಸ್ ನೀಡುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.