ಮಿಮಿ ಚಕ್ರವರ್ತಿ
ಕೋಲ್ಕತ್ತ: ಅಕ್ರಮ ಬೆಟ್ಟಿಂಗ್ ಆ್ಯಪ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಮಾಜಿ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.
ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಸೆ.15ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಳೆದ ತಿಂಗಳು ಬಂಗಾಳಿ ನಟ ಅಂಕುಶ್ ಅಜ್ರಾ ಅವರಿಗೂ ಇದೇ ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡಿದ್ದು, ಸೆ.16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸೆ.4ರಂದು ಭಾರತೀಯ ಕ್ರಿಕೆಟ್ ಆಟಗಾರ ಶಿಖರ್ ಧವನ್ ಅವರು ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.