ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ
ಪಿಟಿಐ ಚಿತ್ರ
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮಗಳ ವಿಚಾರಣೆ ಸಂಬಂಧ, ಶ್ರೀನಗರದಲ್ಲಿರುವ ಇ.ಡಿ ಕಚೇರಿಗೆ ಬರುವಂತೆ ಅಬ್ದುಲ್ಲಾಗೆ ಸೂಚಿಸಲಾಗಿದೆ.
ಶ್ರೀನಗರ ಲೋಕಸಭೆ ಕ್ಷೇತ್ರದ ಸಂಸದರಾಗಿರುವ 86 ವರ್ಷದ ಫಾರೂಕ್ ವಿರುದ್ಧ ತನಿಖಾ ಸಂಸ್ಥೆಯು 2022ರಲ್ಲಿ ಚಾರ್ಜ್‌ಶೀಟ್ ದಾಖಲಿಸಿತ್ತು.
ಕ್ರಿಕೆಟ್ ಸಂಸ್ಥೆಯ ಅನುದಾನದ ಹಣವನ್ನು ಪದಾಧಿಕಾರಿಗಳ ಬ್ಯಾಂಕ್ ಖಾತೆಯೂ ಸೇರಿದಂತೆ, ಸಂಬಂಧವೇ ಇಲ್ಲದ ಹಲವರ ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಸೂಕ್ತ ಕಾರಣ ನೀಡದೆ ಹಣ ತೆಗೆದು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಹೇಳಿದೆ.
ಅಬ್ದುಲ್ಲಾ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) 2018ರಲ್ಲಿ ದಾಖಲಿಸಿದ್ದ ಚಾರ್ಜ್‌ಶೀಟ್ ಆಧಾರದಲ್ಲಿ, ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.