ADVERTISEMENT

ಕಲ್ಲಿದ್ದಲು ಕಳ್ಳಸಾಗಣೆ: ಪಶ್ಚಿಮ ಬಂಗಾಳದ 8 ಐಪಿಎಸ್ ಅಧಿಕಾರಿಗಳಿಗೆ ಇ.ಡಿ ಸಮನ್ಸ್

ಪಿಟಿಐ
Published 11 ಆಗಸ್ಟ್ 2022, 11:12 IST
Last Updated 11 ಆಗಸ್ಟ್ 2022, 11:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ನೀಡಿದೆ.

ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್ (ಎಡಿಜಿ, ಸಿಐಡಿ), ಕೋಟೇಶ್ವರ ರಾವ್, ಎಸ್. ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ಅವರಿಗೆ ಸಮನ್ಸ್‌ ನೀಡಲಾಗಿದೆ.

ದೆಹಲಿಯ ಕಚೇರಿಯಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗಲು ಐಪಿಎಸ್‌ ಅಧಿಕಾರಿಗಳಿಗೆ ನಿರ್ದಿಷ್ಟ ದಿನಾಂಕಗಳನ್ನು ನೀಡಲಾಗಿದೆ ಎಂದು ಇ.ಡಿ ತಿಳಿಸಿದೆ.

ADVERTISEMENT

‘ಈ ಐಪಿಎಸ್ ಅಧಿಕಾರಿಗಳು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಈ ಹಗರಣದಿಂದ ಅವರು ಲಾಭ ಪಡೆದಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ. ಕಳ್ಳಸಾಗಣೆ ನಡೆದ ಪ್ರದೇಶಗಳಲ್ಲಿ ಅವರೆಲ್ಲರನ್ನು ನಿಯೋಜಿಸಲಾಗಿತ್ತು’ ಎಂದು ಇಡಿ ಅಧಿಕಾರಿ ತಿಳಿಸಿದ್ದಾರೆ.

ಈ ಎಂಟು ಅಧಿಕಾರಿಗಳಲ್ಲಿ ಏಳು ಮಂದಿಗೆ ಕಳೆದ ವರ್ಷವೂ ಇಡಿ ಸಮನ್ಸ್ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.