ADVERTISEMENT

₹ 16 ಲಕ್ಷ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ನಕ್ಸಲ ಮುಖಂಡನ ವಿರುದ್ಧ ಪಿಎಂಎಲ್‌ಎ ಪ್ರಕರಣ

ಪಿಟಿಐ
Published 2 ಫೆಬ್ರುವರಿ 2021, 7:45 IST
Last Updated 2 ಫೆಬ್ರುವರಿ 2021, 7:45 IST
ಇ.ಡಿ
ಇ.ಡಿ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ನಕ್ಸಲ್ ಮುಖಂಡನ ಪತ್ನಿಗೆ ಸೇರಿದ ₹ 16 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಸಂಸ್ಥೆ ಮಂಗಳವಾರ ತಿಳಿಸಿದೆ.

ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಉಪವಲಯ ಕಮಾಂಡರ್‌ ಆಗಿರುವ ಅಭಿಜಿತ್‌ ಯಾದವ್‌ ಅಲಿಯಾಸ್‌ ಮಹಾವೀರ್‌ ಯಾದವ್‌ ಎಂಬಾತನ ವಿರುದ್ಧ ಹಣಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಲಾಗಿದೆ. ಅಭಿಜಿತ್‌ ಯಾದವ್‌ ತಲೆ ಮರೆಸಿಕೊಂಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT