ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ
(ಚಿತ್ರ ಕೃಪೆ– X/@ANI)
ನವದೆಹಲಿ: ಸೈಬರ್ ವಂಚನೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶೋಧ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಿಪಿಪಿವೈಎಲ್ ಸೈಬರ್ ಆ್ಯಪ್ ವಂಚನೆ ಪ್ರಕರಣ ಸಂಬಂಧ ನೈಋತ್ಯ ದೆಹಲಿಯ ಕಪಶೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್‌ಹೌಸ್‌ನಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು. ಈ ವೇಳೆ ಅಶೋಕ್ ಶರ್ಮಾ ಮತ್ತು ಆತನ ಸಹೋದರರು ಇ.ಡಿ ತಂಡದ ಮೇಲೆ ದಾಳಿ ಮಾಡಿದ್ದಾರೆ.
ಘಟನೆಯಲ್ಲಿ ಅಧಿಕಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.