ADVERTISEMENT

ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2022, 4:54 IST
Last Updated 11 ಜುಲೈ 2022, 4:54 IST
   

ಚೆನ್ನೈ: ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ಬೆಳಿಗ್ಗೆನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಒಪಿಎಸ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್: ಇದಕ್ಕೂ ಮುನ್ನ, ಎಐಎಡಿಎಂಕೆಯ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ(ಒಪಿಎಸ್) ಮಾಡಿದ್ದ ಮನವಿಯನ್ನು ಸೋಮವಾರ ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ರಾಜಕೀಯ ಪಕ್ಷದ ಜಗಳದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಈ ಮೂಲಕ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರತಿಸ್ಪರ್ಧಿ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಪಕ್ಷದ ಸಂಭವನೀಯ ಏಕೈಕ ನಾಯಕನಾಗಿ ಘೋಷಿಸಲು ನ್ಯಾಯಾಲಯ ದಾರಿ ಮಾಡಿಕೊಟ್ಟಿತ್ತು.

ADVERTISEMENT

ನ್ಯಾಯಮೂರ್ತಿ ಕೃಷ್ಣನ್ ರಾಮಸ್ವಾಮಿ ಅವರು ಸೋಮವಾರ ಬೆಳಿಗ್ಗೆ ತೀರ್ಪು ನೀಡಿದ್ದು, ತಮಿಳುನಾಡಿನ ಪ್ರಮುಖ ವಿರೋಧ ಪಕ್ಷದ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಜಿಸಿ(ಸಾಮಾನ್ಯ ಮಂಡಳಿ)ಸಭೆಯನ್ನು ನಡೆಸಲು ಇಪಿಎಸ್(ಎಡಪ್ಪಾಡಿ ಪಳನಿಸ್ವಾಮಿ) ಬಣಕ್ಕೆ ಅನುಮತಿ ನೀಡಿದ್ದರು.

ಜುಲೈ 8ರಂದು ಒಪಿಎಸ್ ಮತ್ತು ಇಪಿಎಸ್ ಪರ ಹಿರಿಯ ವಕೀಲರ ಸುದೀರ್ಘ ವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.