ADVERTISEMENT

ಇ.ಡಿ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ರಾಜೀನಾಮೆ

ಪಿಟಿಐ
Published 11 ಮಾರ್ಚ್ 2023, 13:58 IST
Last Updated 11 ಮಾರ್ಚ್ 2023, 13:58 IST
   

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ವಕೀಲ ನಿತೇಶ್ ರಾಣಾ ವೈಯಕ್ತಿಕ ಕಾರಣಗಳನ್ನು ನೀಡಿ ಶನಿವಾರ ರಾಜೀನಾಮೆ ನೀಡಿದ್ದಾರೆ.

ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಪ್ರಕರಣಗಳು ಸೇರಿದಂತೆ ಹಲವಾರು ಉನ್ನತ ಪ್ರಕರಣಗಳನ್ನು ಅವರು ನಿರ್ವಹಿಸಿದ್ದರು.

ಹಲವಾರು ಭಯೋತ್ಪಾದಕ ಪ್ರಕರಣಗಳನ್ನು ಅವರು ನಿರ್ವಹಣೆ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.