ADVERTISEMENT

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ಗೆ ಕೋವಿಡ್-19 ದೃಢ

ಪಿಟಿಐ
Published 21 ಏಪ್ರಿಲ್ 2021, 11:25 IST
Last Updated 21 ಏಪ್ರಿಲ್ 2021, 11:25 IST
ರಮೇಶ್ ಪೋಖ್ರಿಯಾಲ್‌
ರಮೇಶ್ ಪೋಖ್ರಿಯಾಲ್‌   

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಕೋವಿಡ್ ದೃಢಪಟ್ಟ ವರದಿ ಬಂದ ನಂತರ ಸಚಿವರು ವೈದ್ಯಕೀಯ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ‘ ಎಂದು ಸಚಿವರು ಟ್ವೀಟ್‌ ಮಾಡಿದ್ದಾರೆ.‌ ಶಿಕ್ಷಣ ಸಚಿವಾಲಯಕ್ಕೆ ಸಂಬಂಧಿಸಿದ ಎಲ್ಲ ಕೆಲಸಗಳು ಎಂದಿನಂತೆ ನಡೆಯಲಿವೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.