ADVERTISEMENT

2024ರೊಳಗೆ ನಕ್ಸಲ್‌ ಮುಕ್ತ ದೇಶಕ್ಕೆ ಯತ್ನ: ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 14:40 IST
Last Updated 7 ಜನವರಿ 2023, 14:40 IST
ಅಮಿತ್‌ ಶಾ
ಅಮಿತ್‌ ಶಾ   

ರಾಯ್‌ಪುರ (ಪಿಟಿಐ): ಕಳೆದ ಒಂದು ದಶಕದಲ್ಲಿ ದೇಶದಲ್ಲಿ ನಕ್ಸಲ್‌ ಹಿಂಸಾಚಾರವು ಕಡಿಮೆಯಾಗಿದೆ. 2024ರ ಲೋಕಸಭಾ ಚುನಾವಣೆಗೂ ಮೊದಲು ದೇಶವನ್ನು ನಕ್ಸಲ್‌ವಾದದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ಹೇಳಿದರು.

ಛತ್ತೀಸಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯೊಂದರಲ್ಲಿ ಮಾತನಾಡಿದ ಅವರು, 2009ರಲ್ಲಿ 2,258 ನಕ್ಸಲ್‌ ಹಿಂಸಾಚಾರ ಪ್ರಕರಣಗಳು ವರದಿಯಾಗಿದ್ದವು. ಆದರೆ, 2021ರಲ್ಲಿ 509 ಪ್ರಕರಣಗಳು ವರದಿಯಾಗಿವೆ ಎಂದರು.

ರಾಜ್ಯದಲ್ಲಿಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಪರಾಧ ಮತ್ತು ಭ್ರಷ್ಟಾಚಾರ ಹೆಚ್ಚಾಗಿರುವುದೇ ಕಾಂಗ್ರೆಸ್‌ ಆಡಳಿತಾವಧಿಯ ಪ್ರಮುಖ ಸಾಧನೆ. 2024ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಆಗಬೇಕಾದರೆ ಮುಂಬರುವ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಭೂಪೇಶ್‌ ಬಘೆಲ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವಂತೆ ಕರೆ ನೀಡಿದರು.

ADVERTISEMENT

ಜಿಲ್ಲಾ ಖನಿಜ ಪ್ರತಿಷ್ಠಾನದ (ಡಿಎಂಎಪ್‌) ನಿರ್ವಹಣೆಯಲ್ಲಿಯೂ ಬಘೆಲ್‌ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಅಮಿತ್‌ ಶಾ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.