ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ಬೆಂಗಳೂರು: ಈದ್ ಮಿಲಾದ್ ಹಾಗೂ ಕೇರಳದ ಓಣಂ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯ ಕೋರಿದ್ದಾರೆ.
ಇಂದು 'ಈದ್ ಮಿಲಾದ್'. ಪ್ರವಾದಿ ಮಹಮ್ಮದ್ ಅವರ ಜನ್ಮದಿನದವನ್ನು ಈ ದಿನ ಆಚರಿಸಲಾಗುತ್ತದೆ. ಪ್ರವಾದಿ ಮಹಮ್ಮದ್ ಅವರ ಕರುಣೆ, ಸೇವೆ ಮತ್ತು ಮೌಲ್ಯಗಳು ಸದಾ ನಮ್ಮನ್ನು ಮಾರ್ಗದರ್ಶಿಸಲಿ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇಸ್ಲಾಮಿಕ್ ಕ್ಯಾಲೆಂಡರಿನ ಮೂರನೇ ತಿಂಗಳು ರಬೀವುಲ್ ಅವ್ವಲ್. ಪ್ರವಾದಿ ಅವರು ರಬೀವುಲ್ ಅವ್ವಲ್ ತಿಂಗಳ 12ರಂದು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಜನಿಸಿದರು. ಅವರ ಜನ್ಮದಿನದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಹಾಗೂ ಅವರ ಜೀವನಚರಿತ್ರೆ ಮತ್ತು ಸಂದೇಶಗಳನ್ನು ನೆನಪಿಸಲಾಗುತ್ತದೆ.
ಕೇರಳದಲ್ಲಿ ಇಂದು (ಶುಕ್ರವಾರ) ಓಣಂ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಕೇರಳದ ಜನರಿಗೂ ಪ್ರಧಾನಿ ಮೋದಿ ಹಬ್ಬದ ಶುಭಾಶಯ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.