ADVERTISEMENT

ಕಾಶ್ಮೀರ | ಮೂವರು ವ್ಯಕ್ತಿಗಳ ಮೇಲೆ ಹಲ್ಲೆ, ಎಂಟು ಸೈನಿಕರ ವಿರುದ್ಧ ದೂರು ದಾಖಲು

ಜಮ್ಮು ಮತ್ತು ಕಾಶ್ಮೀರದ ರಂಬಾನ್‌ ಸಮೀಪದ ಗ್ರಾಮದಲ್ಲಿ ನಡೆದ ಘಟನೆ

ಪಿಟಿಐ
Published 24 ಜೂನ್ 2021, 8:06 IST
Last Updated 24 ಜೂನ್ 2021, 8:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬನಿಹಾಲ್‌/ಜಮ್ಮು: ಜಮ್ಮು ಮತ್ತು ಕಾಶ್ಮೀರ ಜಿಲ್ಲೆಯ ರಂಬಾನ್‌ ಸಮೀಪದ ಗ್ರಾಮವೊಂದರಲ್ಲಿ ಕಾರಣವಿಲ್ಲದೇ ಮೂವರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಂಟು ಮಂದಿ ಸೈನಿಕರ ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್‌ಪಂಚರೊಬ್ಬರ ದೂರಿನ ಅನ್ವಯ, ರಾಷ್ಟ್ರೀಯ ರೈಫಲ್ಸ್‌ಗೆ ಸೇರಿದ ಎಂಟು ಮಂದಿ ಯೋಧರ ವಿರುದ್ಧ ಬನಿಹಾಲ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡವರನ್ನು ಖಾರಿ ಗ್ರಾಮದಲ್ಲಿನ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಮಹೂ–ಖಾರಿ ಪಂಚಾಯತ್‌ನ ಸರಪಂಚರು, ಗಾಯಾಳುಗಳಾದ ಮೊಹಮ್ಮದ್ ರಫೀಕ್, ಬಿಲಾಲ್ ಅಹ್ಮದ್ ಮತ್ತು ಅಬ್ದುಲ್ ರಶೀದ್ ಅವರೊಂದಿಗೆ, ಖಾರಿಯಲ್ಲಿರುವ ಪೊಲೀಸ್ ಹೊರಠಾಣೆಗೆ ತೆರಳಿ ದೂರು ನೀಡಿದ್ದರು. ‘ಈ ಮೂವರು ಕುರಿ ಮತ್ತು ಮೇಕೆಗಳನ್ನು ಖರೀದಿಸಲು ಅರಣ್ಯ ಪ್ರದೇಶಕ್ಕೆ ಹೋದಾಗ ಸೈನಿಕರು ಯಾವುದೇ ಕಾರಣವಿಲ್ಲದೇ ಈ ಮೂವರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ಮೊಬೈಲ್‌ ಫೋನ್ ಮತ್ತು ಸ್ವಲ್ಪ ಹಣವನ್ನು ಹಸಿದುಕೊಂಡಿದ್ದಾರೆ‘ ಎಂದು ಸರಪಂಚ್‌ ‌ಆರೋಪಿಸಿ, ದೂರು ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.