ನರೇಂದ್ರ ಮೋದಿ
(ಪಿಟಿಐ ಚಿತ್ರ)
ಮುಂಬೈ: 'ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ವರದಿಯ ಪ್ರಕಾರ ಕಳೆದ ಮೂರು, ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿವೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಬೈಯಲ್ಲಿ ₹29,000ಕ್ಕೂ ಅಧಿಕ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಮಾತನಾಡಿದರು.
'ಇತ್ತೀಚೆಗೆ ಆರ್‌ಬಿಐ ಉದ್ಯೋಗದ ಕುರಿತು ವಿವರವಾದ ಅಂಕಿಅಂಶ ಪ್ರಕಟಿಸಿದೆ. ಆರ್‌ಬಿಐ ಪ್ರಕಾರ ಕಳೆದ ಮೂರು, ನಾಲ್ಕು ವರ್ಷಗಳಲ್ಲಿ ಸುಮಾರು ಎಂಟು ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿವೆ. ಇದು ಉದ್ಯೋಗಗಳ ಬಗ್ಗೆ ಸುಳ್ಳು ಮಾಹಿತಿ ಹರಡುವವರನ್ನು ಮೌನವಾಗಿಸಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
'ದೇಶದಲ್ಲಿ ಕೌಶಲಾಭಿವೃದ್ಧಿ ಹಾಗೂ ಉದ್ಯೋಗಾವಕಾಶದ ಹೆಚ್ಚಿನ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ' ಎಂದು ಅವರು ಹೇಳಿದ್ದಾರೆ.
'ಸಣ್ಣ ಹಾಗೂ ದೊಡ್ಡ ಹೂಡಿಕೆದಾರರನ್ನು ನಮ್ಮ ಸರ್ಕಾರವು ಸ್ವಾಗತಿಸಲಿದೆ' ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.