ಅತ್ಯಾಚಾರ
ರೇವಾ: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಪತಿ ಜತೆ ವಿಹಾರಕ್ಕೆ ಬಂದಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶನಿವಾರ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಗುಢ್ ತಾಲ್ಲೂಕಿನ ಪ್ರವಾಸಿ ತಾಣದಲ್ಲಿ ಅ.21ರಂದು ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಐವರು ದುಷ್ಕರ್ಮಿಗಳು ಹಾಗೂ ಇದನ್ನು ವಿಡಿಯೊ ಚಿತ್ರೀಕರಣ ಮಾಡಿದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
‘ಬಂಧಿತರು 20 ವಯಸ್ಸಿನ ಆಸುಪಾಸಿನವರು. ಐವರು ಅತ್ಯಾಚಾರಿಗಳ ಪೈಕಿ ಒಬ್ಬರನ್ನು ಛತ್ತೀಸಗಢದ ರಾಯಪುರದಲ್ಲಿ ಬಂಧಿಸಲಾಗಿದೆ’ ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಸುದ್ದಿಸಂಸ್ಥೆಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.