
ನವಸಾರಿ: ಗುಜರಾತಿನ ನವಸಾರಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಂಟು ಜನರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.
‘ಘಟನೆ ಜನವರಿ 7ರಂದು ವಾಂಸದಾ ನಗರದ ಸಮೀಪದ ಗ್ರಾಮವೊಂದರಲ್ಲಿ ನಡೆದಿದೆ. ಬಾಲಕಿ ರಾತ್ರಿ 10.30ಕ್ಕೆ ಶೌಚಕ್ಕೆಂದು ಮನೆಯ ಹೊರಗೆ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಪರಿಚಿತರಾಗಿದ್ದ ಮೂವರು ಆಕೆಯನ್ನು ಅಪಹರಿಸಿದ್ದಾರೆ’ ಎಂದು ಅಧಿಕಾರಿ ಹೇಳಿದ್ದಾರೆ.
‘ದುಷ್ಕರ್ಮಿಗಳು ಸಂತ್ರಸ್ತೆಯನ್ನು 2.5 ಕಿ.ಮೀ. ಕರೆದೊಯ್ದಿದ್ದರು. ಅಲ್ಲಿ ಅವರಿಗಾಗಿ ಐವರು ಕಾಯುತ್ತಿದ್ದರು. ನಂತರ ಎಂಟು ಮಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳಲ್ಲಿ ಏಳು ಮಂದಿ 20–21 ವರ್ಷದವರಾಗಿದ್ದು, ಒಬ್ಬ ಕಾನೂನು ಎದುರು ಸಂಘರ್ಷಕ್ಕೊಳಗಾದ ಅಪ್ರಾಪ್ತ’ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.