ADVERTISEMENT

ಉತ್ತರ ಪ್ರದೇಶ: ನಕಲಿ ಮದ್ಯ ಸೇವಿಸಿ 8 ಮಂದಿ ಸಾವು

ಪಿಟಿಐ
Published 28 ಮೇ 2021, 10:04 IST
Last Updated 28 ಮೇ 2021, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಲಿಗಢ: ‘ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಶುಕ್ರವಾರ ಮೃತಪಟ್ಟಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಕಾರ್ಸಿಯಾದಲ್ಲಿ ಪರವಾನಗಿ ಹೊಂದಿದ್ದ ಮದ್ಯ ಮಾರಾಟಗಾರನೊಬ್ಬನಿಂದ ಖರೀದಿಸಿದ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಲೂಧಾ ಪೊಲೀಸರು ತಿಳಿಸಿದ್ದರು. ಆದರೆ ಹಿರಿಯ ಜಿಲ್ಲಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ ವೇಳೆ ಇನ್ನೂ ಆರು ಮಂದಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಇವರೆಲ್ಲರೂ ಟ್ರಕ್‌ ಚಾಲಕರಾಗಿದ್ದರು’ ಎಂದು ಡಿಐಜಿ ದೀಪಕ್‌ ಕುಮಾರ್‌ ಹೇಳಿದ್ದಾರೆ.

‘ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮದ್ಯದ ಅಂಗಡಿಯನ್ನು ಸೀಲ್‌ಡೌನ್‌ ಮಾಡಿದ್ದು, ಮದ್ಯದ ಮಾದರಿಗಳನ್ನು ಸಂಗ್ರಹಿಸಲಾಗಿದೆ’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.