ADVERTISEMENT

ರಾಜಸ್ಥಾನ: ಬಾಲಕಿಯ ಮೇಲೆ ಅತ್ಯಾಚಾರ, ಕತ್ತು ಹಿಸುಕಿ ಕೊಲೆ

ಪಿಟಿಐ
Published 30 ನವೆಂಬರ್ 2020, 7:29 IST
Last Updated 30 ನವೆಂಬರ್ 2020, 7:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ: ಎಂಟು ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಂದಿರುವ ಘಟನೆ ರಾಜಸ್ಥಾನದ ಪ್ರತಾಪ್‌ಗಢದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದರು.

ಬಾಲಕಿಯ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸ್‌ ಅಧಿಕಾರಿ ರವೀಂದ್ರ ಪತ್ರಾಪ್‌ ಸಿಂಗ್‌ ಅವರು ಹೇಳಿದರು.

‘ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ಅಪ್ರಾಪ್ತೆಯನ್ನು ಆರೋಪಿಗಳು ಅಪಹರಿಸಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದಿದ್ದಾರೆ. ಬಾಲಕಿಯ ಮನೆಯಿಂದ 300 ಮೀಟರ್ ದೂರದಲ್ಲಿರುವ ಪಾಳು ಬಾವಿಯಲ್ಲಿ ಆಕೆಯನ್ನು ಎಸೆದಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

‘ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.