ADVERTISEMENT

ತೆಲಂಗಾಣ: ಶೇ 85 ಕೋವಿಡ್ ಪ್ರಕರಣಗಳು ದೆಹಲಿ ನಿಜಾಮುದ್ದೀನ್ ಮರ್ಕಜ್‌ ಸಂಬಂಧಿತ

ಏಜೆನ್ಸೀಸ್
Published 11 ಏಪ್ರಿಲ್ 2020, 2:00 IST
Last Updated 11 ಏಪ್ರಿಲ್ 2020, 2:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್: ರಾಜ್ಯದಲ್ಲಿ ದೃಢಪಟ್ಟಿರುವ ಕೊರೊನಾ ವೈರಸ್ ಸೋಂಕು (ಕೋವಿಡ್–19) ಪ್ರಕರಣಗಳ ಪೈಕಿ ಶೇ 85 ದೆಹಲಿಯ ನಿಜಾಮುದ್ದೀನ್‌ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರು ಮತ್ತು ಅವರಿಗೆಸಂಬಂಧಿತ ಎಂದು ತೆಲಂಗಾಣ ಆರೋಗ್ಯ ಸಚಿವ ಇಟಾಲ ರಾಜೇಂದ್ರ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಮಾತುಕತೆ ವೇಳೆ ಅವರು ಈ ಮಾಹಿತಿ ನೀಡಿದ್ದಾರೆ.

‘ಈಗಿರುವ ಸೋಂಕಿತರು ಗುಣಮುಖರಾದರೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ. ಸೋಂಕು ಹರಡದಂತೆ ತಡೆಯಲು ಕ್ರಮಗಳನ್ನು ಕೈಗೊಳ್ಳಲಾಗಿದೆ’ಎಂದೂ ಅವರು ತಿಳಿಸಿದ್ದಾರೆ.

ADVERTISEMENT

8,500 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 471 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 45 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.