ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಸರ್ಕಾರವು ‘ಹಣವಿಲ್ಲದೆ’ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪ್ರಾಮಾಣಿಕ ಸೇನಾ ಕಾರ್ಯಕರ್ತರು ನನ್ನೊಂದಿಗಿದ್ದಾರೆ ಎಂದೂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
ಮುಂಬೈನಲ್ಲಿ ಶಿವಸೇನಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದ ಜನರು ‘ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಲು’ ವಿಧಾನಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
'ಖೋಕಾ' (ಹಣ ತುಂಬಿರುವ ಪೆಟ್ಟಿಗೆ) ಇಲ್ಲದೆ ಶಿಂದೆ ತಂಡವು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಶಿಂದೆ– ಫಡಣವೀಸ್ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯನ್ನು ಮುನ್ನಡೆಸುವ ಧೈರ್ಯವಿಲ್ಲ ಎಂದು ತಿಳಿಸಿದ್ದಾರೆ.
ಪ್ರಾಮಾಣಿಕ ಮತ್ತು ನಿಷ್ಠರಾಗಿರುವ ಜನರಿಂದ ತುಂಬಿರುವ ಪೆಟ್ಟಿಗೆಗಳು ನಮ್ಮ ಬಳಿ ಇವೆ ಎಂದು ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ (ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ) ಸರ್ಕಾರದ ವಿರುದ್ಧ ಶಿಂದೆ ನೇತೃತ್ವದಲ್ಲಿ ಶಿವಸೇನಾದ ಹಲವು ಶಾಸಕರು ಬಂಡಾಯ ಸಾರಿದ್ದರು. ಬಳಿಕ, ಶಿಂದೆ ಅವರು ಬಿಜೆಪಿ ಬೆಂಬಲದೊಂದಿಗೆ ಜೂನ್ 30ರಂದು ಮುಖ್ಯಮಂತ್ರಿಯಾಗಿ, ಫಡಣವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.