ಕೇಂದ್ರ ಗೃಹ ಸಚಿವ ಅಮಿತ್ ಶಾ
ಮುಂಬೈ; ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರು ನಿಜವಾದ ಶಿವಸೇನಾ ಯಾವುದು ಎಂಬುವುದನ್ನು ಎಲ್ಲರಿಗೂ ತೋರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಕಾರ್ಯಕ್ರಮವೊಂದಲ್ಲಿ ಭಾಗಿವಹಿಸಿ ಮಾತನಾಡಿದ ಅವರು ಶಿಂದೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದ ಶಿಂದೆ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಪತನಗೊಳಿಸಿದರು. ಬಳಿಕ ಬಾಳ್ ಠಾಕ್ರೆ ಸ್ಥಾಪಿಸಿದ ಶಿವಸೇನಾ ಪಕ್ಷವು ಜೂನ್ 2022ರಲ್ಲಿ ವಿಭಜನೆಯಾಯಿತು. ಅಂದಿನಿಂದ ಎರಡೂ ಬಣಗಳು ಶಿವಸೇನಾ ಪಕ್ಷಕ್ಕಾಗಿ ಹೋರಾಟ ನಡೆಸಿದವು. ಈ ಬಣಗಳು ಶಿವಸೇನಾ ಪರಂಪರೆಯನ್ನು ಪ್ರತಿಪಾದಿಸಲು ನಿಜವಾದ ಶಿವಸೇನಾಗಾಗಿ ಹೋರಾಟ ನಡೆಸಿದವು.
ಈಗ ಕ್ರಮವಾಗಿ ಶಿವಸೇನಾ ಮತ್ತು ಶಿವಸೇನಾ (ಯುಬಿಟಿ) ಎಂದು ಕರೆಯಲ್ಪಡುವ ಏಕನಾಥ ಶಿಂದೆ ಮತ್ತು ಉದ್ಧವ್ ಠಾಕ್ರೆ ಬಣಗಳು ಅವಿಭಜಿತ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಿದ ಬಳಿಕ ಶಾ ಈ ಹೇಳಿಕೆಗಳನ್ನು ನೀಡಿದ್ದಾರೆ.
ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ 288 ಸದಸ್ಯ ಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಶಿಂದೆ ನೇತೃತ್ವದ ಶಿವಸೇನಾ 57 ಕ್ಷೇತ್ರಗಳಲ್ಲಿ ಗೆದ್ದರೆ, ಶಿವಸೇನಾ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಶಿಂದೆ ನೇತೃತ್ವದ ಶಿವಸೇನಾ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.