ADVERTISEMENT

ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಜಾರಿ: ಬಿಹಾರ ಸಿಎಂ ನಿತೀಶ್ ಘೋಷಣೆ

ಪಿಟಿಐ
Published 3 ಜನವರಿ 2026, 7:34 IST
Last Updated 3 ಜನವರಿ 2026, 7:34 IST
<div class="paragraphs"><p>ನಿತೀಶ್ ಕುಮಾರ್</p></div>

ನಿತೀಶ್ ಕುಮಾರ್

   

– ಪಿಟಿಐ ಚಿತ್ರ

ಪಟ್ನಾ: ಹಿರಿಯ ನಾಗರಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲು ಆದೇಶಿಸಿರುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.

ADVERTISEMENT

ಈ ಕುರಿತಂತೆ ಎಕ್ಸ್ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿತೀಶ್, ‘ಅಗತ್ಯವಿರುವ ಹಿರಿಯ ನಾಗರಿಕರಿಗೆ ಶುಶ್ರೂಷಕರ ನೆರವು, ಮನೆಯಲ್ಲೇ ರಕ್ತದೊತ್ತಡ, ಇಸಿಜಿ ಹಾಗೂ ಇತರ ಪರೀಕ್ಷೆ ಹಾಗೂ ಇತರ ರೀತಿಯ ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಆರೋಗ್ಯ ಸೇವೆಗಳು ಅಗತ್ಯವಿರುವ ಸಮಯದಲ್ಲಿ ಅವರ ಮನೆಗಳಲ್ಲೇ ಸಿಗುವಂತೆ ನೋಡಿಕೊಳ್ಳುವುದು ನಮ್ಮ ಪ್ರಯತ್ನವಾಗಿದೆ’ಎಂದು ತಿಳಿಸಿದ್ದಾರೆ.

ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಆರೋಗ್ಯ ಸಂಬಂಧಿತ ಸೌಲಭ್ಯಗಳು ರಾಜ್ಯದ ಹಿರಿಯ ನಾಗರಿಕರಿಗೆ ಅವರ ಮನೆಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲು ತ್ವರಿತವಾಗಿ ಕಾರ್ಯೋನ್ಮುಖವಾಗುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಬರೆದಿದ್ದಾರೆ.

‘ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ಸಮಾಜದ ಎಲ್ಲ ವರ್ಗಗಳ ಜನರ ಉನ್ನತಿಗಾಗಿ ಮತ್ತು ನ್ಯಾಯಯುತ ಅಭಿವೃದ್ಧಿಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ಪ್ರತಿಯೊಂದು ವಲಯದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇವೆ. ನಾವು ಇಡೀ ಬಿಹಾರವನ್ನು ನಮ್ಮ ಕುಟುಂಬವೆಂದು ಪರಿಗಣಿಸಿದ್ದೇವೆ’ಎಂದಿದ್ದಾರೆ.

ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲು ರಾಜ್ಯ ಸರ್ಕಾರ 'ಸಾತ್ ನಿಶ್ಚಯ್ -3' ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ 'ಸಾತ್ ನಿಶ್ಚಯ್ -3' ಜಾರಿಗೆ ಬಿಹಾರ ಸಚಿವ ಸಂಪುಟವು ಇತ್ತೀಚೆಗೆ ಅನುಮೋದನೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.