
ಪ್ರಜಾವಾಣಿ ವಾರ್ತೆಹೈದರಾಬಾದ್: ಸೌದಿ ಅರೇಬಿಯಾದಿಂದ ದಮ್ಮಮ್‌ಗೆ ಸಂಚರಿಸುತ್ತಿದ್ದ ವಿಮಾನದ ಮಹಿಳಾ ಸಿಬ್ಬಂದಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಹಿರಿಯ ನಾಗರಿಕ ಪ್ರಯಾಣಿಕರೊಬ್ಬರ ವಿರುದ್ಧ ಇಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 13ರಂದು ದೂರು ದಾಖಲಾಗಿದೆ. ವಿಮಾನ ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ವಿಮಾನದ ಮಹಿಳಾ ಸಿಬ್ಬಂದಿ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ಇದು ಆಕಸ್ಮಿಕ ಘಟನೆ, ಉದ್ದೇಶಪೂರ್ವಕವಾಗಿ ಸ್ಪರ್ಶಿಸಿಲ್ಲ’ ಎಂದು ಆರೋಪಿತ ಪ್ರಯಾಣಿಕರು ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ‘ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಸಂಬಂಧಿಸಿದ ಪ್ರಯಾಣಿಕರಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.