ಸಾವು
(ಪ್ರಾತಿನಿಧಿಕ ಚಿತ್ರ)
ಅಹಮದಾಬಾದ್: ಇಲ್ಲಿನ ಬೋಪಾಲ್ ಪ್ರದೇಶದಲ್ಲಿ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
21 ಅಂತಸ್ತಿನ ಇಸ್ಕಾನ್ ಪ್ಲಾಟಿನಾ ಎಂಬ ಕಟ್ಟಡದ 8ನೇ ಮಹಡಿಯಲ್ಲಿ ಶುಕ್ರವಾರ ರಾತ್ರಿ 10.40ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, 200ಕ್ಕೂ ಹೆಚ್ಚು ನಿವಾಸಿಗಳನ್ನು ಕಟ್ಟಡದಿಂದ ಸ್ಥಳಾಂತರಿಸಲಾಗಿದೆ ಎಂದು ಬೋಪಾಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.