ADVERTISEMENT

ಬಿಜೆಪಿಗೆ ಸನ್ನಿ ಡಿಯೋಲ್?

​ಪ್ರಜಾವಾಣಿ ವಾರ್ತೆ
Published 11 ಮೇ 2019, 11:19 IST
Last Updated 11 ಮೇ 2019, 11:19 IST

ಚಂಡೀಗಡ:ಬಾಲಿವುಡ್ ನಟ ಸನ್ನಿ ಡಿಯೋಲ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಪಂಜಾಬ್‌ನ ಅಮೃತಸರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಆದರೆ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನವದೆಹಲಿಯಲ್ಲಿ ಇರುವ ಸನ್ನಿ ಡಿಯೋಲ್ ಅವರ ಮನೆಗೆ ಶನಿವಾರ ಭೇಟಿ ನೀಡಿದರು. ‘ಅಮೃತಸರದಿಂದ ಕಣಕ್ಕೆ ಇಳಿಯುವ ಸಂಬಂಧ ಸನ್ನಿ ಅವರ ಮನವೊಲಿಸಲು ಶಾ ಯತ್ನಿಸಿದರು. ಆದರೆ ಮಾತುಕತೆ ಫಲಪ್ರದವಾಯಿತೇ ಎಂಬುದು ಬಹಿರಂಗವಾಗಿಲ್ಲ’ ಎಂದು ಬಿಜೆಪಿ ಮೂಲಗಳು ಹೇಳಿವೆ.

‘ನಾನು ರಾಜಕೀಯ ಸೇರುತ್ತೇನೆ ಎಂಬುದರ ಬಗ್ಗೆ ಹರಡಿರುವ ವದಂತಿಗಳನ್ನು ಕೇಳಿದ್ದೇನೆ. ಅಮಿತ್ ಶಾ ಅವರು ನನ್ನನ್ನು ಭೇಟಿ ಮಾಡಿದ್ದರು. ನಾನು ಮತ್ತು ಅವರು ಚಿತ್ರ ತೆಗೆಸಿಕೊಂಡವು ಅಷ್ಟೆ’ ಎಂದು ಸನ್ನಿ ಡಿಯೋಲ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.