ನಾಗ್ಪುರ: ಕಳೆದ ಲೋಕಸಭೆ ಚುನಾವಣೆಯಿಂದ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಹೊತ್ತಿಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಅಧಿಕಗೊಂಡಿದೆ ಎಂದು ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಚುನಾವಣಾ ವಿಶ್ಲೇಷಕ ಸಂಜಯ್ ಕುಮಾರ್ ಅವರ ವಿರುದ್ಧ ಇಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.
ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮಧ್ಯೆ ಆರು ತಿಂಗಳ ಅಂತರವಿತ್ತು. ಈ ಅವಧಿಯಲ್ಲಿ ಎರಡು ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಅಧಿಕಗೊಂಡಿದೆ ಎಂದು ಸಂಜಯ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಾಖಲೆಗಳು, ವಿಶ್ಲೇಷಣೆಗಳ ಸಮೇತ ಪೋಸ್ಟ್ ಹಂಚಿಕೊಂಡಿದ್ದರು.
ಬಳಿಕ ಈ ಮಾಹಿತಿಗಳಲ್ಲಿ ಕೆಲವು ದೋಷಗಳಿವೆ ಎಂದು ಹೇಳಿ ಸಂಜಯ್ ಅವರು ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು. ತಪ್ಪು ಮಾಹಿತಿ ಹಂಚಿಕೊಂಡಿದ್ದಕ್ಕಾಗಿ ಕ್ಷಮೆಯನ್ನೂ ಕೇಳಿದ್ದರು. ರಾಮ್‌ಟೇಕ್ ನಗರದ ತಹಶೀಲ್ದಾರ್ ಅವರ ದೂರಿನ ಅನ್ವಯ ಸಂಜಯ್ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.