ADVERTISEMENT

ಪಳನಿಸ್ವಾಮಿ ಜನನವೇ ಅಕ್ರಮವೆಂದ ಎ.ರಾಜಾಗೆ 48 ಗಂಟೆಗಳ ಚುನಾವಣಾ ಪ್ರಚಾರ ನಿಷೇಧ

ಏಜೆನ್ಸೀಸ್
Published 1 ಏಪ್ರಿಲ್ 2021, 12:12 IST
Last Updated 1 ಏಪ್ರಿಲ್ 2021, 12:12 IST
ಎ.ರಾಜಾ
ಎ.ರಾಜಾ   

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಜನನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಎ. ರಾಜಾ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗವು ಆದೇಶಿಸಿದೆ.

ಉದಯನಿಧಿ ಸ್ಟಾಲಿನ್ ಸ್ಪರ್ಧಿಸುತ್ತಿರುವ ಚೆಪಾಕ್-ತಿರುವಳ್ಳಿಕೆಣಿಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಎ. ರಾಜಾ ಅವರು ,'ಸ್ಟಾಲಿನ್ ಅವರು ಉತ್ತಮ ಸಂಬಂಧದಿಂದ ಜನಿಸಿದ್ದಾರೆ. ಆದರೆ, ಪಳನಿಸ್ವಾಮಿ ಜನಿಸಿದ್ದು ಅಕ್ರಮ ಸಂಬಂಧದಿಂದ ಮತ್ತು ಅದು ಅಕಾಲಿಕ ಜನನ’ ಎಂದು ಹೇಳಿಕೆ ನೀಡಿದ್ದರು.

ಸಿಎಂ ಪಳನಿಸ್ವಾಮಿ ವಿರುದ್ಧ ಎ.ರಾಜಾ ಅವರು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದ ಎಐಎಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ADVERTISEMENT

ಈ ಮಧ್ಯೆ, ಎ. ರಾಜ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಎಐಎಡಿಎಂಕೆ, ಪಿಎಂಕೆ ಸೇರಿದಂತೆ ಮಿತ್ರ ಪಕ್ಷಗಳ ಕಾರ್ಯಕರ್ತರು ತಮಿಳುನಾಡಿನ ಹಲವೆಡೆ ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.