ಚುನಾವಣಾ ಆಯೋಗ
ನವದೆಹಲಿ: ಜನನ ಮತ್ತು ಮರಣ ನೋಂದಣಿಯ ದತ್ತಾಂಶವನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಿದರೆ, ಮೃತಪಟ್ಟ ವ್ಯಕ್ತಿಗಳ ಹೆಸರು ಪಟ್ಟಿಯಲ್ಲಿ ಉಳಿದುಕೊಳ್ಳುವುದನ್ನು ಸಂಪೂರ್ಣವಾಗಿ ತಪ್ಪಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಹಲವು ವರ್ಷಗಳಿಂದ ಮತದಾರರ ಪಟ್ಟಿಯಲ್ಲಿ ಉಳಿದುಕೊಂಡಿದ್ದ ಮೃತಪಟ್ಟಿರುವ ವ್ಯಕ್ತಿಗಳ ಹೆಸರನ್ನು ತೆಗೆದುಹಾಕಲಾಯಿತು. ಎಸ್‌ಐಆರ್ ಜತೆಗೆ ಜನನ–ಮರಣ ನೋಂದಣಿ ದತ್ತಾಂಶವನ್ನು ಚುನಾವಣಾ ವ್ಯವಸ್ಥೆಗೆ ಜೋಡಿಸಿದರೆ ಈ ಲೋಪವನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ಬಿಹಾರದ ಎಸ್‌ಐಆರ್ ಭವಿಷ್ಯದಲ್ಲಿ ಉಳಿದ ರಾಜ್ಯಗಳಿಗೂ ಮಾದರಿ ಆಗಲಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.
‘ಎಸ್‌ಐಆರ್‘ಗೆ ಮೊದಲು ಬಿಹಾರದಲ್ಲಿ 7.89 ಕೋಟಿ ಮತದಾರರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 65 ಲಕ್ಷದಷ್ಟು ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಯಿತು. ಇದರಲ್ಲಿ 22 ಲಕ್ಷದಷ್ಟು ಮೃತ ವ್ಯಕ್ತಿಗಳ ಹೆಸರುಗಳಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.