ADVERTISEMENT

ಚುನಾವಣಾ ಆಯೋಗದ ಮುಖ್ಯಸ್ಥರ 'ಕೈಗಳಿಗೆ ರಕ್ತದ ಕಲೆ ಅಂಟಿದೆ': ಟಿಎಂಸಿ ಕಿಡಿ

ಪಿಟಿಐ
Published 28 ನವೆಂಬರ್ 2025, 11:37 IST
Last Updated 28 ನವೆಂಬರ್ 2025, 11:37 IST
<div class="paragraphs"><p>ಚುನಾವಣಾ ಆಯೋಗ</p></div>

ಚುನಾವಣಾ ಆಯೋಗ

   

ಪಿಟಿಐ ಚಿತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ‌ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ಮಂದಿ ಮೃತಪಟ್ಟಿದ್ದು, 'ಚುನಾವಣಾ ಆಯೋಗದ ಮುಖ್ಯಸ್ಥರ ಕೈಗಳಿಗೆ ರಕ್ತದ ಕಲೆ ಅಂಟಿದೆ' ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

ADVERTISEMENT

ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಯಾನ್‌ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಿಯೋಗವು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ ) ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡಿದೆ.

ಒಬ್ರಯಾನ್‌ ಮಾತನಾಡಿ, ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಸೇರಿದಂತೆ 40 ಮಂದಿ ಬಿಎಲ್‌ಒಗಳು ಮೃತಪಟ್ಟಿದ್ದಾರೆ. ಈ ಸಂಬಂಧ ಜ್ಞಾನೇಶ್ ಕುಮಾರ್ ಅವರಿಗೆ ಪ್ರಮುಖವಾಗಿ ಐದು ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ ಅವರು ಯಾವುದೇ ಉತ್ತರ ಕೊಡಲಿಲ್ಲ. ನಿಮ್ಮ ಕೈಗಳಿಗೆ ರಕ್ತದ ಕಲೆ ಅಂಟಿದೆ ಎನ್ನುವ ಮೂಲಕ ನಾವು ಚರ್ಚೆ ಪ್ರಾರಂಭಿಸಿದ್ದೆವು. ಆ ಬಳಿಕ ನಮ್ಮ ಬೇಡಿಕೆಗಳನ್ನು ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಟಿಎಂಸಿಯು ಎಸ್‌ಐಆರ್ ಪರಿಕಲ್ಪನೆಯನ್ನು ವಿರೋಧಿಸುತ್ತಿಲ್ಲ. ಆದರೆ ಸಿಇಸಿ ಮತ್ತು ಇಸಿ ಕೈಗೊಂಡ ಕಾರ್ಯ ವಿಧಾನವನ್ನು ಬಲವಾಗಿ ವಿರೋಧಿಸುತ್ತದೆ ಎಂದು ಒಬ್ರಯಾನ್‌ ತಿಳಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೃತಪಟ್ಟ 40 ಮಂದಿಯ ಪಟ್ಟಿಯನ್ನು ಆಯುಕ್ತರಿಗೆ ನೀಡಲಾಗಿದೆ. ಆದರೆ ಆಯೋಗವು ಈ ಆರೋಪಗಳನ್ನು ತಳ್ಳಿಹಾಕಿದೆ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.