ಜ್ಞಾನೇಶ್ ಕುಮಾರ್
(ಪಿಟಿಐ ಚಿತ್ರ)
ಪಿರೋಝಾಬಾದ್ (ಯುಪಿ): ಚುನಾವಣಾ ಆಯೋಗವು ರಾಜಕೀಯ ಪಕ್ಷಗಳೊಂದಿಗೆ ನಿಯಮಿತ ಸಂವಾದವನ್ನು ನಡೆಸುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಶನಿವಾರ ಪ್ರತಿಪಾದಿಸಿದರು. ಕಳೆದ ನಾಲ್ಕು ತಿಂಗಳಲ್ಲಿ ಇಂತಹ 5,000 ಸಭೆಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬಿಹಾರ ಚುನಾವಣೆಗೆ ಸಂಬಂಧಿಸಿದ ತಮ್ಮ ಕಳವಳಗಳನ್ನು ಆಯೋಗ ನಿರ್ಲಕ್ಷಿಸುತ್ತಿದೆ ಎಂಬ ವಿಪಕ್ಷಗಳ ಅರೋಪಕ್ಕೆ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಮತದಾರರ ನಂತರ ಆಯೋಗದ ಮುಂದಿನ ಪ್ರಮುಖ ಪಾಲುದಾರರು ರಾಜಕೀಯ ಪಕ್ಷಗಳಾಗಿವೆ’ ಎಂದರು.
‘ಚುನಾವಣಾ ಆಯೋಗವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಾದ ನಡೆಸುತ್ತಿದೆ. ಕಳೆದ ನಾಲ್ಕು ತಿಂಗಳುಗಳಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ, ಪ್ರತಿ ಜಿಲ್ಲೆಯಲ್ಲಿ ಮತ್ತು ಪ್ರತಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರ್ವಪಕ್ಷ ಸಭೆಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ 28,000 ಜನರು ಭಾಗವಹಿಸಿದ್ದರು’ ಎಂದು ಅವರು ಹೇಳಿದರು.
‘ಇದು ಮಾತ್ರವಲ್ಲದೆ, ಚುನಾವಣಾ ಆಯೋಗವು ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳನ್ನು ಭೇಟಿ ಮಾಡುತ್ತಿದೆ. ಐದು ರಾಷ್ಟ್ರೀಯ ಪಕ್ಷಗಳು ಮತ್ತು ನಾಲ್ಕು ರಾಜ್ಯ ಪಕ್ಷಗಳು ಭೇಟಿ ಮಾಡಲಾಗಿದೆ. ಯಾವುದೇ ಸಮಸ್ಯೆ ಇದ್ದರೆ, ಸರ್ವಪಕ್ಷ ನಿಯೋಗಗಳು ಸಹ ಬಂದು ಚುನಾವಣಾ ಆಯೋಗವನ್ನು ಭೇಟಿ ಮಾಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.