ADVERTISEMENT

ಹರಿಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಇಂದು ಮಧ್ಯಾಹ್ನ ಪ್ರಕಟಣೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 3:53 IST
Last Updated 21 ಸೆಪ್ಟೆಂಬರ್ 2019, 3:53 IST
   

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆಯದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಮಧ್ಯಾಹ್ನಪ್ರಕಟಿಸುವ ಸಾಧ್ಯತೆಗಳಿವೆ.

ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ ಮಾಧ್ಯಮಗೋಷ್ಠಿ ನಡೆಸಲಿದ್ದು ಈ ವೇಳೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ.

ಚುನಾವಣೆದಿನಾಂಕ ಪ್ರಕಟವಾದರೆ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಬಹುತೇಕ ಆಕ್ಟೋಬರ್‌ ತಿಂಗಳಲ್ಲೇ ಚುನಾವಣೆ ನಡೆದು ಫಲಿತಾಂಶ ಹೊರ ಬೀಳಲಿದೆ.

ADVERTISEMENT

2014ರ ಆಕ್ಟೋಬರ್‌ 15 ರಂದು ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಕ್ಟೋಬರ್‌ 19ರಂದು ಫಲಿತಾಂಶ ಹೊರಬಂದಿತ್ತು.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳು ಹಾಗೂಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.