ADVERTISEMENT

ಸರ್ಕಾರದಿಂದಲೇ ಚುನಾವಣಾ ವೆಚ್ಚ: ವಿರೋಧ

ಪಿಟಿಐ
Published 2 ಮಾರ್ಚ್ 2020, 19:45 IST
Last Updated 2 ಮಾರ್ಚ್ 2020, 19:45 IST
ಚುನಾವಣಾ ಆಯೋಗ
ಚುನಾವಣಾ ಆಯೋಗ   

ನವದೆಹಲಿ: ಚುನಾವಣೆಗಳಲ್ಲಿ ಅಭ್ಯರ್ಥಿಗಳು ಮತ್ತು ಪಕ್ಷಗಳ ವೆಚ್ಚವನ್ನು ಸರ್ಕಾರವೇ ಭರಿಸುವ ಪ್ರಸ್ತಾವಕ್ಕೆ ಚುನಾವಣಾ ಆಯೋಗವು ವಿರೋಧ ವ್ಯಕ್ತಪಡಿಸಿದೆ. ಈ ಕ್ರಮವನ್ನು ಅನುಸರಿಸಿದರೂ, ಸರ್ಕಾರ ನೀಡಿದ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಅಭ್ಯರ್ಥಿಗಳು ವೆಚ್ಚ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ ಎಂದು ಲೋಕಸಭೆಗೆ ಸೋಮವಾರ ಮಾಹಿತಿ ನೀಡಲಾಗಿದೆ.

ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯ ವಿಚಾರದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ. ಪಕ್ಷಗಳು ಮಾಡುವ ವೆಚ್ಚದ ವಿಚಾರದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕು. ಹಾಗಾದರೆ ಮಾತ್ರ ನಿಜವಾದ ಸಮಸ್ಯೆಗಳ ಪರಿಹಾರ ಸಾಧ್ಯ ಎಂದು ಆಯೋಗ ಹೇಳಿರುವುದಾಗಿ ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್‌ ಠಾಕೂರ್‌ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT