ADVERTISEMENT

ತೆಲಂಗಾಣ ಸಚಿವ ಕೆ.ಟಿ ರಾಮರಾವ್‌ಗೆ ಚುನಾವಣಾ ಆಯೋಗ ನೋಟಿಸ್

ಪಿಟಿಐ
Published 26 ನವೆಂಬರ್ 2023, 3:22 IST
Last Updated 26 ನವೆಂಬರ್ 2023, 3:22 IST
 ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್
ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಟಿ. ರಾಮರಾವ್   

ಹೈದರಾಬಾದ್‌: ಸರ್ಕಾರಿ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಸಂವಾದ ನಡೆಸುವ ಮೂಲಕ ವೇದಿಕೆಯನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಐಟಿ ಸಚಿವ ಕೆ.ಟಿ ರಾಮರಾವ್‌ ಅವರಿಗೆ ಚುನಾವಣಾ ಆಯೋಗ ಶನಿವಾರ ನೋಟಿಸ್‌ ನೀಡಿದೆ.

ಕಾಂಗ್ರೆಸ್‌ನ ಸಂಸದ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ದೂರನ್ನು ಆಧರಿಸಿ ನೋಟಿಸ್‌ ನೀಡಲಾಗಿದ್ದು, ಇಂದು( ಭಾನುವಾರ) ಮಧ್ಯಾಹ್ನದೊಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ಕೆಟಿಆರ್‌ಗೆ ಸೂಚಿಸಿದೆ.

ಟಿ-ವರ್ಕ್ಸ್‌ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯೊಂದಿಗೆ ಕೆಟಿಆರ್‌ ಸಂವಾದ ನಡೆಸಿದ್ದಾರೆ. ಅಧಿಕೃತ ಭೇಟಿಯನ್ನು ಖಾಸಗಿ ಅಥವಾ ರಾಜಕೀಯವಾಗಿ ಸಂಯೋಜಿಸಬಾರದು ಎಂದು ಚುನಾವಣಾ ಆಯೋಗ ನೀತಿ ಸಂಹಿತೆಯ ನಿಬಂಧನೆಯನ್ನು ಉಲ್ಲೇಖಿಸಿದೆ.

ADVERTISEMENT

ಇಂದು (ಭಾನುವಾರ) ಮಧ್ಯಾಹ್ನ 3 ಗಂಟೆಯೊಳಗೆ ಸರ್ಕಾರಿ ಸಂಸ್ಥೆಗೆ ಭೇಟಿ ನೀಡಿದ ಬಗ್ಗೆ ತಮ್ಮ ನಿಲುವನ್ನು ವಿವರಿಸಲು ಆಯೋಗವು ರಾಮರಾವ್ ಅವರಿಗೆ ತಿಳಿಸಿದೆ. ಒಂದು ವೇಳೆ ನಿಗದಿತ ಸಮಯಕ್ಕೆ ಉತ್ತರ ನೀಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದೆ.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಮಾತ್ರವಲ್ಲದೇ, ಕೆ.ಟಿ ರಾಮರಾವ್‌ ಸ್ಟಾರ್‌ ಪ್ರಚಾರಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.