ನವದೆಹಲಿ:ದೆಹಲಿ ವಿಧಾನಸಭೆ ಚುನಾವಣೆ ಫೆಬ್ರುವರಿ 8ರಂದು ನಡೆಯಲಿದ್ದು, 11ರಂದು ಫಲಿತಾಂಶ ಪ್ರಕಟವಾಗಲಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಹಾಲಿ ವಿಧಾನಸಭೆ ಅವಧಿ ಫೆಬ್ರುವರಿ 22ಕ್ಕೆ ಕೊನೆಗೊಳ್ಳಲಿದೆ.
ಮುಖ್ಯ ದಿನಾಂಕಗಳು
ಜನವರಿ14: ಅಧಿಸೂಚನೆ
ಜನವರಿ21: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಜನವರಿ 22: ನಾಮಪತ್ರ ಪರಿಶೀಲನೆ
ಜನವರಿ 24: ನಾಮಪತ್ರ ಹಿಂಪಡೆಯಲು ಕೊನೆಯ ದಿನ
ಈ ಬಾರಿ ಒಟ್ಟು 1.46 ಕೋಟಿ ಮತದಾರರಿದ್ದಾರೆ. ಈ ಪೈಕಿ 80.55 ಲಕ್ಷ ಪುರುಷರು ಮತ್ತು 66.35 ಲಕ್ಷ ಮಹಿಳಾ ಮತದಾರರಿದ್ದಾರೆ. 13,750 ಬೂತ್‌ಗಳಲ್ಲಿ ಮತದಾನ ನಡೆಯಲಿದೆ ಎಂದುಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ತಿಳಿಸಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ 2015ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) 67 ಸ್ಥಾನಗಳನ್ನು ಗೆದ್ದಿತ್ತು.
ಕಳೆದ ವರ್ಷ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲ 7 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿತ್ತು. ಅದಾದ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.