ADVERTISEMENT

ಏಕನಾಥ ಶಿಂದೆ ಬಣವೇ ಶಿವಸೇನೆ: ಚುನಾವಣಾ ಆಯೋಗದ ಘೋಷಣೆ

ಪಿಟಿಐ
Published 17 ಫೆಬ್ರುವರಿ 2023, 14:24 IST
Last Updated 17 ಫೆಬ್ರುವರಿ 2023, 14:24 IST
ಸಿಎಂ ಏಕನಾಥ ಶಿಂದೆ ಮತ್ತು ಶಿವಸೇನಾದ ಚಿಹ್ನೆ
ಸಿಎಂ ಏಕನಾಥ ಶಿಂದೆ ಮತ್ತು ಶಿವಸೇನಾದ ಚಿಹ್ನೆ    

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಣೆ ಮಾಡಿದೆ.

ಅದರಂತೆ, ಶಿಂದೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಮತ್ತು ಬಾಣ'ದ ಗುರುತು ದಕ್ಕಿದೆ.

2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ವಿಜೇತ ಅಭ್ಯರ್ಥಿಗಳ ಪೈಕಿ ಶೇ 76 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ. ಉದ್ಧವ್ ಠಾಕ್ರೆ ಪರವಾಗಿ ಶೇ. 23.5 ಮಂದಿ ಮಾತ್ರ ಇದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ADVERTISEMENT

ತಮ್ಮ ಬಣವನ್ನೇ ನಿಜವಾದ ಶಿವಸೇನೆ ಎಂದು ಘೋಷಿಸಿದ್ದಕ್ಕೆ ಮುಖ್ಯಮಂತ್ರಿ ಏಕನಾಥ ಶಿಂದೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತಕ್ಕೆ ಸಿಕ್ಕ ಜಯ ಎಂದು ಅವರು ಹೇಳಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.