ನವದೆಹಲಿ: ನೋಂದಾಯಿತ ಮತ್ತು ಮಾನ್ಯತೆ ಪಡೆಯದ 474 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.
ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಭಾಗವಹಿಸಿಲ್ಲ ಹಾಗೂ ಮಾನದಂಡಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅದು ಹೇಳಿದೆ.
ಇದರೊಂದಿಗೆ ಕಳೆದ 2 ತಿಂಗಳಲ್ಲಿ ಒಟ್ಟು 808 ಪಕ್ಷಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಆ.9 ರಂದು ಮೊದಲ ಹಂತದಲ್ಲಿ 334 ಪಕ್ಷಗಳನ್ನು ಕೈಬಿಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.