not examine voters' lists
ನವದೆಹಲಿ: ಮತದಾರರ ಪಟ್ಟಿಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗವು, ‘ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಎಲ್ಲ ಹಂತಗಳಲ್ಲಿ ರಾಜಕೀಯ ಪಕ್ಷಗಳು ಭಾಗಿಯಾಗುತ್ತವೆ. ಆದರೆ, ಕೆಲವು ರಾಜಕೀಯ ಪಕ್ಷಗಳು ಮತ್ತು ಬೂತ್ ಮಟ್ಟದ ಏಜೆಂಟರು ಮತದಾರರ ಪಟ್ಟಿಯನ್ನು ಪರಿಶೀಲಿಸುವುದಿಲ್ಲ ಮತ್ತು ಸರಿಯಾದ ಸಮಯದಲ್ಲಿ ಆಕ್ಷೇಪ ದಾಖಲಿಸುವುದಿಲ್ಲ’ ಎಂದು ತಿರುಗೇಟು ನೀಡಿದೆ.
ಲೋಪ ರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಕೂಲಂಕಷ ಪರಿಶೀಲನೆಯನ್ನು ಆಯೋಗವು ಸ್ವಾಗತಿಸುತ್ತದೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್) ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 65 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.