
ಚಂಡೀಗಢ: ಚುನಾವಣಾ ಆಯೋಗವು ಸಾಕ್ಷಿ ಕೇಳುವುದನ್ನು ಬಿಟ್ಟು, ಮತದಾರರ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ದೇಶದಾದ್ಯಂತ ವ್ಯಕ್ತವಾಗುತ್ತಿರುವ ಆಕ್ಷೇಪಗಳಿಗೆ ಉತ್ತರಿಸಲಿ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ.
ಚುನಾವಣಾ ಆಯೋಗವು ಸಾಕ್ಷಿ ಕೇಳುತ್ತಿದೆ. ಜನರು ಆಕ್ಷೇಪ ವ್ಯಕ್ತಪಡಿಸಿದಾಗ ಅದರ ಕುರಿತು ಕ್ರಮ ತೆಗೆದುಕೊಳ್ಳುವುದು ಅವರ ಕರ್ತವ್ಯ. ಆದರೆ, ಇವರು ಏಕೆ ಸಾಕ್ಷಿಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ಮಾನ್ ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಎಸ್‌ಐಆರ್ ಕುರಿತು ಆತಂಕ ವ್ಯಕ್ತಪಡಿಸುತ್ತಿವೆ.
2026ರಲ್ಲಿ ವಿಧಾನಸಭಾ ಚುನಾವಣೆಗಳು ಜರುಗಲಿರುವ 9 ರಾಜ್ಯ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆಯುತ್ತಿದೆ. ಅದು ಇನ್ನೂ ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. 50.97 ಕೋಟಿ ಮತದಾರರಲ್ಲಿ 50.40 ಕೋಟಿ ಮಂದಿ ಎಸ್‌ಐಆರ್ ಫಾರ್ಮ್‌ಗಳನ್ನು ನೀಡಿದ್ದಾರೆ ಎಂದು ಚುನಾವಣಾ ಆಯೋಗವು ಗುರುವಾರ ಮಾಹಿತಿ ನೀಡಿತ್ತು.
ನವೆಂಬರ್ 4ರಂದು ಎರಡನೇ ಹಂತದ ಎಸ್‌ಐಆರ್ ಆರಂಭಗೊಂಡಿತ್ತು. ಡಿ.4ರಂದು ಮುಕ್ತಾಯಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.