ಚಿತ್ರಕೃಪೆ: X/RJD
ಸಮಸ್ತಿಪುರ: ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ವಿವಿಪ್ಯಾಟ್ ಚೀಟಿಗಳ ರಾಶಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಚುನಾವಣಾ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯ ಸರಾಯ್‌ರಂಜನ್ ವಿಧಾನಸಭಾ ಕ್ಷೇತ್ರದ ಕಾಲೇಜು ಬಳಿ ರಸ್ತೆ ಬದಿಯಲ್ಲಿ ಚೀಟಿಗಳು ಬಿದ್ದಿರುವುದು ಕಂಡುಬಂದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ನಂತರ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
‘ಇವು ಅಣಕು ಮತದಾನದ ವಿವಿಪ್ಯಾಟ್ ಸ್ಲಿಪ್‌ಗಳಾಗಿದ್ದು, ಮತದಾನ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ. ಇಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ, ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ’ ಎಂದು ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.