ADVERTISEMENT

ಆಯೋಗಕ್ಕೆ ಸುಧಾರಣೆಯ ಸಲಹೆ: ಜೈರಾಮ್

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 15:51 IST
Last Updated 19 ಡಿಸೆಂಬರ್ 2025, 15:51 IST
<div class="paragraphs"><p>ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್‌</p></div>

ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್‌

   

ಕೃಪೆ: ಪಿಟಿಐ

ನವದೆಹಲಿ (ಪಿಟಿಐ): ‘ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಸಂಬಂಧಿಸಿದಂತೆ ಸೂಕ್ತ ಸಲಹೆಗಳನ್ನು ಆಯೋಗಕ್ಕೆ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್‌ ಶುಕ್ರವಾರ ತಿಳಿಸಿದ್ದಾರೆ.

ADVERTISEMENT

ಕಾಂಗ್ರೆಸ್‌ ಪಕ್ಷವು 2014ರಿಂದಲೂ ಚುನಾವಣಾ ಸುಧಾರಣೆಗಳಿಗಾಗಿ, ಚುನಾವಣಾ ಕಾವಲು ಪಡೆಗೆ ಒಂದೇ ಒಂದು ಸಲಹೆಯನ್ನು ನೀಡಿಲ್ಲ ಎಂಬ ಬಿಜೆಪಿ ಆರೋಪವನ್ನು ತಿರಸ್ಕರಿಸಿದ್ದಾರೆ.

‘ರಾಜ್ಯಸಭಾ ನಾಯಕ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇವೆ. ಶೀಘ್ರದಲ್ಲೇ ಈ ಆರೋಪ ಸುಳ್ಳು ಎಂಬುದನ್ನು ಸಾಬೀತುಪಡಿಸುವ ದಾಖಲೆಯನ್ನು ಬಿಡುಗಡೆಗೊಳಿಸುತ್ತೇವೆ’ ಎಂದಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.