ADVERTISEMENT

ಚುನಾವಣೆ ಮುಗಿದಿದೆ, ಕಾನೂನು ಸುವ್ಯವಸ್ಥೆ ಮೇಲೆ ಗಮನ ಕೊಡಿ: ಬಿಜೆಪಿಗೆ ಸಿಸೋಡಿಯಾ

ಪಿಟಿಐ
Published 19 ಫೆಬ್ರುವರಿ 2025, 9:54 IST
Last Updated 19 ಫೆಬ್ರುವರಿ 2025, 9:54 IST
<div class="paragraphs"><p>ಮನೀಶ್‌ ಸಿಸೋಡಿಯಾ</p></div>

ಮನೀಶ್‌ ಸಿಸೋಡಿಯಾ

   

( ಸಂಗ್ರಹ ಚಿತ್ರ)

ನವದೆಹಲಿ: ದೆಹಲಿಯಲ್ಲಿ ವಿಧಾಸನಭೆ ಚುನಾವಣೆ ಮುಗಿದಿದೆ. ಈಗಲಾದರೂ ಕಾನೂನು ಸುವ್ಯವಸ್ಥೆ ಕಾಪಾಡುವುದರತ್ತ ಗಮನ ಕೊಡಿ ಎಂದು ಬಿಜಿಪಿಗೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲಹೆ ನೀಡಿದ್ದಾರೆ.

ADVERTISEMENT

ತಿಲಕ್ ನಗರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಸಿಸೋಡಿಯಾ ಹೇಳಿಕೆ ಕೊಟ್ಟಿದ್ದಾರೆ.

'ದೆಹಲಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಅಪರಾಧಿಗಳು ಕಾನೂನು ಉಲ್ಲಂಘನೆ ಮಾಡಲು ಹೆದರುತ್ತಿಲ್ಲ' ಎಂದು ಅವರು ಹೇಳಿದ್ದಾರೆ.

'ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇನ್ನಾದರೂ ಕಾನೂನು ಸುವವ್ಯಸ್ಥೆ ಕಾಪಾಡುವುದರತ್ತ ಬಿಜೆಪಿ ಗಮನಹರಿಸಬೇಕಿದೆ' ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಂಗ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮನೀಶ್ ಸಿಸೋಡಿಯಾ ಅವರು ಬಿಜೆಪಿಯ ತನ್ವೀಂದರ್ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.