ADVERTISEMENT

ರಾಜ್ಯಸಭೆಯ 13 ಸ್ಥಾನಗಳಿಗೆ ಮಾರ್ಚ್‌ 31ರಂದು ಚುನಾವಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮಾರ್ಚ್ 2022, 10:34 IST
Last Updated 7 ಮಾರ್ಚ್ 2022, 10:34 IST
ರಾಜ್ಯಸಭೆ- ಸಂಗ್ರಹ ಚಿತ್ರ
ರಾಜ್ಯಸಭೆ- ಸಂಗ್ರಹ ಚಿತ್ರ   

ನವದೆಹಲಿ: ರಾಜ್ಯಸಭೆಯ 13 ಸ್ಥಾನಗಳಿಗೆ ಮಾರ್ಚ್‌ 31ರಂದು ಚುನಾವಣೆ ನಿಗದಿ ಪಡಿಸಿರುವುದಾಗಿ ಚುನಾವಣಾ ಆಯೋಗವು ಸೋಮವಾರ ಪ್ರಕಟಿಸಿದೆ.

ಒಟ್ಟು ಆರು ರಾಜ್ಯಗಳಿಂದ ರಾಜ್ಯಸಭೆಯ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ ಐದು ಸ್ಥಾನಗಳು, ಕೇರಳದಲ್ಲಿ ಮೂರು, ಅಸ್ಸಾಂನಲ್ಲಿ ಎರಡು, ಹಿಮಾಚಲ ಪ್ರದೇಶ, ತ್ರಿಪುರಾ ಹಾಗೂ ನಾಗಾಲ್ಯಾಂಡ್‌ನಿಂದ ತಲಾ ಒಂದು ಸ್ಥಾನ ಖಾಲಿ ಉಳಿದಿವೆ.

ಆನಂದ್‌ ಶರ್ಮಾ, ಎ.ಕೆ.ಆಂಟೊನಿ, ಪ್ರತಾಪ್‌ ಸಿಂಗ್‌ ಬಾಜ್ವಾ, ನರೇಶ್‌ ಗುಜರಾಲ್‌ ಸೇರಿದಂತೆ ಹಲವು ಮುಖಂಡರು ರಾಜ್ಯಸಭೆಯ ಸದಸ್ಯ ಸ್ಥಾನದಿಂದ ನಿವೃತ್ತರಾಗಲಿದ್ದಾರೆ.

ADVERTISEMENT

ರಾಜ್ಯಸಭೆಯ ಸ್ಥಾನಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 4,120 ಶಾಸಕರು ರಾಷ್ಟ್ರಪತಿ ಆಯ್ಕೆಗೆ ಮತದಾನ ಮಾಡುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.