ಚುನಾವಣೆ
(ಸಾಂದರ್ಭಿಕ ಚಿತ್ರ)
ನವದೆಹಲಿ: ರಾಜ್ಯಸಭೆಯ ಎಂಟು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ಅಸ್ಸಾಂನಲ್ಲಿ ಎರಡು ಸ್ಥಾನಗಳು ಜೂನ್‌ನಲ್ಲಿ ಹಾಗೂ ತಮಿಳುನಾಡಿನಲ್ಲಿ ಆರು ಸ್ಥಾನಗಳು ಜುಲೈನಲ್ಲಿ ತೆರವಾಗಲಿವೆ. ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
126 ಶಾಸಕರ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 84 ಸದಸ್ಯರನ್ನು ಹೊಂದಿದೆ. ಅಸ್ಸಾಂನಲ್ಲಿ ತೆರವಾಗುವ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುವ ಗುರಿಯನ್ನು ಎನ್‌ಡಿಎ ಹೊಂದಿದೆ.
ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟವು ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಳ್ಳುವ ನಿರೀಕ್ಷೆ ಇದೆ. ಎಐಎಡಿಎಂಕೆ ಮತ್ತು ಅದರ ಮಿತ್ರಪಕ್ಷವಾದ ಪಿಎಂಕೆ ಜೊತೆಯಾಗಿ ಇನ್ನುಳಿದ ಎರಡು ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ.
ಈ ಚುನಾವಣೆಯ ನಂತರದಲ್ಲಿ ರಾಜ್ಯಸಭೆಯಲ್ಲಿ ವಿವಿಧ ಪಕ್ಷಗಳ ಸಂಖ್ಯಾಬಲದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇಲ್ಲ. ರಾಜ್ಯಸಭಾ ಚುನಾವಣೆಯ ಅಧಿಸೂಚನೆಯನ್ನು ಜೂನ್ 2ರಂದು ಹೊರಡಿಸಲಾಗುತ್ತದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.