ನವದೆಹಲಿ: ಮಹಾರಾಷ್ಟ್ರದ ಕೊಲ್ಹಾಪುರದ ಜೈನ ಮಠದ ಆನೆ ‘ಮಹಾದೇವಿ’ (30)ಯನ್ನು ಗುಜರಾತ್‌ನ ವಂತಾರ ವನ್ಯಜೀವಿ ಸಂರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಗುರುವಾರದಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್, ಎ.ಎಸ್ ಚಂದುಕರ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.