ರೈಲು ಹಳಿ
ಜಾರ್ಗ್ರಾಮ್: ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಬನ್‌ಸ್ತಾಲಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಎರಡು ಮರಿಗಳು ಸೇರಿದಂತೆ ಮೂರು ಆನೆಗಳು ಸಾವಿಗೀಡಾಗಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಜಾರ್ಖಂಡ್‌ನ ದಾಲ್ಮಾ ಅರಣ್ಯದಿಂದ ಬಂದಿದ್ದ ಆನೆಗಳ ಹಿಂಡು ರೈಲು ಹಳಿ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಖರಗ್‌ಪುರ-ಟಾಟಾನಗರ ಮಾರ್ಗದ ವೇಗವಾಗಿ ಬಂದ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲು ಆನೆಗಳಿಗೆ ಡಿಕ್ಕಿ ಹೊಡೆದಿದೆ. ಹಳಿಗಳ ಪಕ್ಕದಲ್ಲಿ ಮೂರು ಆನೆಗಳ ತುಂಡಾದ ಮೃತದೇಹ ಬಿದ್ದಿದ್ದವು ಎಂದು ಅವರು ತಿಳಿಸಿದ್ದಾರೆ.
ಆನೆಗಳ ಕಳೇಬರದ ಬಳಿಗೆ ತೆರಳಲು ಕೆಲಕಾಲ ಸಾಧ್ಯವಾಗಲಿಲ್ಲ. ಏಕೆಂದರೆ, 30 ಆನೆಗಳ ಹಿಂಡು ಆ ಮಾರ್ಗದಲ್ಲಿ ಸಂಚರಿಸುತ್ತಿತ್ತು ಎಂದೂ ಅವರು ತಿಳಿಸಿದ್ದಾರೆ.
ಘಟನೆ ಕುರಿತಂತೆ ಸರ್ಕಾರ ತನಿಖೆಗೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.